BAGILANU TEREDU Bhajan Lyrics in Kannada

Lyrics :

ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೇ ಕೂಗಿದರು ಧ್ವನಿ ಕೇಳಲಿಲ್ಲವೇ ನರಹರಿಯೆ || ಪ ||

ಪರಮಪದದೊಳಗೆ ವಿಷಧರನ ತಲ್ಪದಲಿ ನೀ
ಸಿರಿಸಹಿತ ಕ್ಷೀರವಾರಿಧಿಯೊಳಿರಲು
ಕರಿರಾಜ ಕಷ್ಟದಲಿ ಆದಿಮೂಲ ಎಂದು
ಕರೆಯಲಾಕ್ಷಣ ಬಂದು ಒದಗಿದೆಯೋ || ೧ ||

ಕಡುಕೋಪದಿಂ ಖಳನು ಖಡ್ಗವನೆ ಪಿಡಿದು
ನಿನ್ನೊಡೆಯ ಎಲ್ಲಿಹನು ಎಂದು ನುಡಿಯೇ
ಧೃಢ ಭಕುತಿಯಲು ಶಿಶುವು ಬಿಡದೆ ನಿನ್ನನು ಭಜಿಸೆ
ಸಡಗರದಿ ಸ್ತಂಭದಿಂದೊಡೆದೆಯೋ || ೨ ||

ಯಮಸುತನ ರಾಣಿಗೆ ಅಕ್ಷಯವಸನವನಿತ್ತೆ
ಸಮಯದಲಿ ಅಜಮಿಳನ ಪೊರೆದೇ ಸಮಯಾಸಮಯವುಂಟೆ ಭಕ್ತವತ್ಸಲ ನಿನಗೆ
ಕಮಲಾಕ್ಷ ಕಾಗಿನೆಲೆಯಾದಿಕೇಶವನೇ || ೩ ||

You can check this Bhajan Audio on YouTube: