KANDENA NARASIMHANA Bhajan Lyrics in Kannada

Lyrics :

ಕಂಡೆ ನಾ ತಂಡ ತಂಡದ ಹಿಂಡು ಹಿಂಡು ದೈವ ಪ್ರಚಂಡ
ರಿಪುಗಂಡ ಉದ್ದಂಡ ನರಸಿಂಹನ ಕಂಡೆ ನಾ ||ಪ||

ಘುಡುಘುಡಿಸಿ ಕಂಬದಲಿ ಧಡಧಡ ಸಿಡಿಲು ಸಿಡಿಯೆ
ಕಿಡಿಕಿಡಿಸೆ ನುಡಿಯಡಗಲೊಡನೆ ಮುಡಿವಿಡಿದು
ಘಡಘಡನೆ ನಡುನಡುಗೆ ಘುಡುಘುಡಿಸಿ ಸಭೆ ಬೆದರೆ
ಹಿಡಿ ಹಿಡಿದು ಹಿರಣ್ಯಕನ ತೊಡೆ ಮೇಲೆ ಕೆಡಹಿದನ||1||

ಉರದೊಳಪ್ಪಳಿಸಿ ಅರಿ ಬಸಿರ ಸರಸರ ಸೀಳಿ
ಪರಿಪರಿಯಲಿ ಚರ್ಮ ಎಳೆದೆಳೆದು ಎಲುಬು
ನರನರವನ್ನು ತೆಗೆದು ನಿರ್ಗಳಿತ ಶೋಣಿತಸುರಿಯೆ ಹರಿಹರಿದು ಕರುಳ ಕೊರಳೊಳಿಟ್ಟವನ||2||

ಪುರಜನರು ಹಾಯೆನಲು ಸುರರು ಹೂಮಳೆಗರೆಯೆ ತರತರದ ವಾದ್ಯ ಸಂಭ್ರಮಗಳಿಂದ
ಹರಿಹರಿಯೆ ಶರಣೆಂದು ಸ್ತುತಿಸಿ ಶಿಶು ಮೊರೆಯಿಡುವ ಕರುಣಾಳು ಕಾಗಿನೆಲೆಯಾದಿಕೇಶವನ||3||

You can check this Bhajan Audio on YouTube: