KARUNISO RANGA KARUNISO Bhajan Lyrics in Kannada

Lyrics :

ಕರುಣಿಸೋ ರಂಗ ಕರುಣಿಸೋ ಕೃಷ್ಣ ಕರುಣಿಸೋ ರಂಗ ಕರುಣಿಸೋ |
ಹಗಲು ಇರುಳು ನಿನ್ನ ಸ್ಮರಣೆ ಮರೆಯದಂತೆ ||ಪ||

ರುಕುಮಾಂಗದನಂತೆ ವ್ರತವ ನಾನರಿಯೆ
ಶುಕಮುನಿಯಂತೆ ಸ್ತುತಿಸಲು ಅರಿಯೆ |
ಬಕವೈರಿಯಂತೆ ಧ್ಯಾನವ ಮಾಡಲರಿಯೆ
ದೇವಕಿಯಂತೆ ಮುದ್ದಿಸಲರಿಯೆನೋ ||1||

ಗರುಡನಂದದಿ ಪೊತ್ತು ತಿರುಗಲು ಅರಿಯೆ
ಕರೆಯಲು ಅರಿಯೆ ಕರಿರಾಜ ನಂತೆ |
ವರಕಪಿ ಯಂತೆ ದಾಸ್ಯವ ಮಾಡಲರಿಯೇ
ಸಿರಿಯಂತೆ ನೆರೆದು ಮೋಹಿಸಲರಿಯೆನೋ ||2||

ಬಲಿಯಂತೆ ದಾನವ ಕೊಡಲು ಅರಿಯೆ
ಭಕ್ತಿ ಛಲವನು ಅರಿಯೇ ಪ್ರಹ್ಲಾದನಂತೆ |
ವರಿಸಲು ಅರಿಯೆ ಅರ್ಜುನನಂತೆ ಸಖನಾಗಿ
ಸಲಹೋ ದೇವರ ದೇವ ಶ್ರೀಪುರಂದರವಿಠ್ಠಲ ||3||