KOOSANU KANDIRA MUKHYAPRANANA KANDIRA Bhajan Lyrics in Kannada

Lyrics :

ಕೂಸನು ಕಂಡೀರಾ
ಮುಖ್ಯಪ್ರಾಣನ ಕಂಡೀರಾ ||ಪ||
ಬಾಲನ ಕಂಡೀರಾ
ಬಲವಂತನ ಕಂಡೀರಾ ||ಅ.ಪ ||

ಅಂಜನೆಯುದರದಿ ಪುಟ್ಟಿತು ಕೂಸು
ರಾಮನ ಚರಣಕೆ ಎರಗಿತು ಕೂಸು
ಸೀತೆಗೆ ಉಂಗುರ ಕೊಟ್ಟಿತು ಕೂಸು
ಲಂಕಾಪುರವನೆ ಸುಟ್ಟಿತು ಕೂಸು ||1||

ಬಂಡಿ ಅನ್ನವನುಂಡಿತು ಕೂಸು
ಬಕನ ಪ್ರಾಣವ ಕೊಂದಿತು ಕೂಸು
ವಿಷದ ಲಡ್ಡುಗೆ ಮೆದ್ದಿತು ಕೂಸು
ಮಡದಿಗೆ ಪುಷ್ಪವ ಕೊಟ್ಟಿತು ಕೂಸು ||2||

ಮಾಯವಾದಿಗಳ ಗೆದ್ದಿತು ಕೂಸು
ದ್ವೈತಮತವನುದ್ಧರಿಸಿತು ಕೂಸು
ಮಧ್ವರಾಯರೆಂಬ ಪೆಸರಿನ ಕೂಸು
ಪುರಂದರವಿಠಲನ ಪ್ರೇಮದ ಕೂಸು ||3||