KRISHNA MOORTHY KANNA MUNDHE Bhajan Lyrics in Kannada

Lyrics :

ಕೃಷ್ಣಮೂರ್ತಿ ಕಣ್ಣ ಮುಂದೆ ನಿಂತಿದಂತಿದೆ ||ಪ||

ಕಷ್ಟಗಳೆಲ್ಲಾ ಪರಿಹರಿಸಿ
ಮನದಿಷ್ಟಾರ್ಥಗಳನೆಲ್ಲಾ ಕೊಟ್ಟು ರಕ್ಷಿಸುವಂಥ ||ಅ.ಪ||

ಮಸ್ತಕದಲಿ ಮಾಣಿಕ್ಯದ ಕಿರೀಟ
ಕಸ್ತೂರಿ ತಿಲಕದಿಂದೆಸೆವ ಲಲಾಟ
ಶಿಸ್ತಿಲಿ ಕೊಳಲನೂದುವ ಓರೆ ನೋಟ
ಕೌಸ್ತುಭ ಎಡಬಲದಲಿ ಓಲಾಟ || 1||

ಮಘಮಘಿಸುವ ಸೊಬಗಿನ ಸುಳಿಗುರುಳು
ಚಿಗುರು ತುಳಸಿ ವನಮಾಲೆಯ ಕೊರಳು
ಬಗೆ ಬಗೆ ಹೊನ್ನುಂಗುರವಿಟ್ಟ ಬೆರಳು
ಸೊಬಗಿನ ನಾಭಿಯ ತಾವರೆ ಯರಳು ||2||

ಉಡುದಾರ ವಡ್ಡ್ಯಾಣ ನಿಖಿಲಾಭರಣ
ಉಡುಗೆ ಪೀತಾಂಬರ ರವಿಶತ ಕಿರಣ
ಕಡಗ ನೂಪುರ ಗೆಜ್ಜೆಗಳನಿಟ್ಟ ಚರಣ
ಒಡೆಯ ಶ್ರೀಪುರಂದರ ವಿಠಲನ ಕರುಣ || 3||