PAVAMANA jagada praana ( HANUMAN BHAJAN) Lyrics in Kannada

Lyrics :

ಪವಮಾನ ಪವಮಾನ ಜಗದಾ ಪ್ರಾಣಾ
ಸಂಕರುಷಣ ಭವಭಯಾರಣ್ಯ ದಹನ || ಪ ||

ಶ್ರವಣವೆ ಮೊದಲಾದ ನವವಿಧ ಭಕುತಿಯ
ತವಕದಿಂದಲಿ ಕೊಡು ಕವಿಗಳ ಪ್ರಿಯ || ಅ.ಪ ||

ಹೇಮ ಕಚ್ಚುಟ ಉಪವೀತ ಧರಿಪ ಮಾರುತ ಕಾಮಾದಿ ವರ್ಗ ರಹಿತ
ವ್ಯೋಮಾದಿ ಸರ್ವವ್ಯಾಪುತ ಸತತ ನಿರ್ಭೀತ ರಾಮಚಂದ್ರನ ನಿಜದೂತ

ಯಾಮ ಯಾಮಕೆ ನಿನ್ನಾರಾಧಿಪುದಕೆ
ಕಾಮಿಪೆ ಎನಗಿದು ನೇಮಿಸಿ ಪ್ರತಿದಿನ
ಈ ಮನಸಿಗೆ ಸುಖಸ್ತೋಮವ ತೋರುತ
ಪಾಮರ ಮತಿಯನು ನೀ ಮಾಣಿಪುದು || 1 ||

ವಜ್ರ ಶರೀರ ಗಂಭೀರ ಮುಕುಟಧರ ದುರ್ಜನ ವನ ಕುಠಾರ
ನಿರ್ಜರ ಮಣಿ ದಯಾಪಾರ ವಾರ ಉದಾರ ಸಜ್ಜನರಘ ಪರಿಹಾರ

ಅರ್ಜುನಗೊಲಿದಂದು ಧ್ವಜವಾನಿಸಿ ನಿಂದು
ಮೂರ್ಜಗವರಿವಂತೆ ಗರ್ಜನೆ ಮಾಡಿದಿ
ಹೆಜ್ಜೆ ಹೆಜ್ಜೆಗೆ ನಿನ್ನಬ್ಜ ಪಾದದ ಧೂಳಿ
ಮರ್ಜನದಲಿ ಭವ ವರ್ಜಿತನೆನಿಸೊ || 2 ||

ಪ್ರಾಣ ಅಪಾನ ವ್ಯಾನ ಉದಾನ ಸಮಾನ ಆನಂದ ಭಾರತೀ ರಮಣ
ನೀನೆ ಶರ್ವಾದಿ ಗೀರ್ವಾಣಾದ್ಯಮರರಿಗೆ ಜ್ಞಾನಧನ ಪಾಲಿಪ ವರೇಣ್ಯ

ನಾನು ನಿರುತದಲಿ ಏನೇನೆಸಗುವೆ
ಮಾನಸಾದಿ ಕರ್ಮ ನಿನಗೊಪ್ಪಿಸಿದೆನೊ
ಪ್ರಾಣನಾಥ ಸಿರಿ ವಿಜಯವಿಠ್ಠಲನ
ಕಾಣಿಸಿ ಕೊಡುವದು ಭಾನು ಪ್ರಕಾಶ || 3 ||

You can check this Bhajan Audio on YouTube: